Press ID & Credential Portal
Apply / Verify  ➔
Stories
Press ID
Login
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News | Technology News

ರಾಜ್ಯದ್ಯಂತ ಪಡಿತರ ಫಲಾನುಭವಿಗಳ ಇ-ಕೆವೈಸಿಗಾಗಿ ‘ಅನ್ನಸೇವೆ’ ಮೊಬೈಲ್ ಆ್ಯಪ್

ಅಕ್ಟೋಬರ್ 20ರೊಳಗೆ ಇ-ಕೆವೈಸಿ ಪೂರ್ಣಗೊಳಿಸಲು ಆಹಾರ ಇಲಾಖೆ ಸೂಚನೆ

news_1791955560_0_855.webp

ಬೆಂಗಳೂರು: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ‘ಅನ್ನಸೇವೆ’ ಮೊಬೈಲ್ ಆ್ಯಪ್ ಅನ್ನು ಪರಿಚಯಿಸಿದೆ.

ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಹಾಗೂ ಇ-ಆಡಳಿತ ಇಲಾಖೆಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಈ ಆ್ಯಪ್ ಮೂಲಕ ಫಲಾನುಭವಿಗಳು ಆಧಾರ್ ಆಧಾರಿತ ಮುಖ ದೃಢೀಕರಣ (Face Authentication) ತಂತ್ರಜ್ಞಾನವನ್ನು ಬಳಸಿಕೊಂಡು ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ. ಆ್ಯಪ್‌ ಅನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಸೇವೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯಾದ್ಯಂತ ಆ್ಯಪ್ ಸೇವೆ

ಈ ಹಿಂದೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದ ‘ಅನ್ನಸೇವೆ’ ಆ್ಯಪ್‌ ಅನ್ನು ರಾಜ್ಯದಾದ್ಯಂತ ವಿಸ್ತರಿಸಲಾಗಿದೆ. ಇದರಿಂದ ಫಲಾನುಭವಿಗಳು ಇ-ಕೆವೈಸಿ ಮಾಡಿಸಲು ನ್ಯಾಯಬೆಲೆ ಅಂಗಡಿಗಳಿಗೆ ಖುದ್ದಾಗಿ ಭೇಟಿ ನೀಡುವ ಅಗತ್ಯವನ್ನು ಕಡಿಮೆ ಮಾಡಬಹುದಾಗಿದೆ. ವಿಶೇಷವಾಗಿ ವೃದ್ಧರು ಹಾಗೂ ನ್ಯಾಯಬೆಲೆ ಅಂಗಡಿಗಳಿಗೆ ತೆರಳಲು ತೊಂದರೆ ಅನುಭವಿಸುವ ಫಲಾನುಭವಿಗಳಿಗೆ ಈ ವ್ಯವಸ್ಥೆ ಅನುಕೂಲವಾಗಲಿದೆ.

ಪ್ರಾಯೋಗಿಕ ಅವಧಿಯಲ್ಲಿ 1.60 ಲಕ್ಷ ಫಲಾನುಭವಿಗಳಿಂದ ಇ-ಕೆವೈಸಿ

ಅಕ್ಟೋಬರ್ 1ರಿಂದ 12ರವರೆಗೆ ನಡೆದ ಪ್ರಾಯೋಗಿಕ ಬಳಕೆಯ ಅವಧಿಯಲ್ಲಿ ರಾಜ್ಯದ 1,60,267 ಫಲಾನುಭವಿಗಳು ಆ್ಯಪ್ ಮೂಲಕ ಇ-ಕೆವೈಸಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ ಎಂದು ಇಲಾಖೆ ತಿಳಿಸಿದೆ. ರಾಜ್ಯದ ಒಟ್ಟು 2.67 ಕೋಟಿ ಪಡಿತರ ಫಲಾನುಭವಿಗಳ ಪೈಕಿ 2.06 ಕೋಟಿಗೂ ಅಧಿಕ ಮಂದಿ ಈಗಾಗಲೇ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ.

ಅಕ್ಟೋಬರ್ 20 ಕೊನೆಯ ದಿನಾಂಕ

ಪಡಿತರ ಚೀಟಿ ಫಲಾನುಭವಿಗಳು ಅಕ್ಟೋಬರ್ 20ರೊಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಇಲಾಖೆ ಸೂಚಿಸಿದೆ. ಒಂದು ವರ್ಷದ ಹಿಂದೆ ಇ-ಕೆವೈಸಿ ಮಾಡಿಸಿಕೊಂಡಿರುವ ಫಲಾನುಭವಿಗಳೂ ಮತ್ತೊಮ್ಮೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಲಾಗಿದೆ.

Author
B News Kannada
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬದುಕಿನುದ್ದಕ್ಕೂ ಸಂಕಷ್ಟಗಳೇ…ಬದುಕು ಬದಲಾಯಿಸಿದ ಲೇಖನಕನ್ನಡ ಕಸ್ತೂರಿ ಅಸ್ಮಿತೆಮದನ ಬಾವಿ ಸರ್ಕಾರಿ ಗೋಶಾಲೆಯ ದುರವಸ್ಥೆ ಖಂಡಿಸಿ ನಾಳೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆಭಾರತೀಯ ಶಾಸ್ತ್ರೀಯ ಸಂಗೀತದಲ್ಲಿ ಸಿತಾರವು ಅತ್ಯಂತ  ಜನಪ್ರಿಯಧಾರವಾಡದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಇ-ಕೆವೈಸಿಗೆ ₹50 ಅಕ್ರಮ ವಸೂಲಿ ಆರೋಪ: ದೊಡ್ಡೇರಿ ನ್ಯಾಯಬೆಲೆ ಅಂಗಡಿಗೆ ನೋಟಿಸ್ಕರ್ನಾಟಕ ಎಜುಕೇಶನ್ ಬೋರ್ಡಿನ ಅಂಗಸಂಸ್ಥೆಯಾದ ​ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ-ಸಡಗರದಿಂದ ಆಚರಿಸಲಾಯಿತುಜೇವರ್ಗಿ–ಯಡ್ರಾಮಿ ಭಾಗದಲ್ಲಿ ಜಿಲ್ಲಾ ಪಂಚಾಯತ್ ಚುನಾವಣೆಯ ಚರ್ಚೆ: ಗಂಗಯ್ಯ ಗುತ್ತೇದಾರ್ ಹೆಸರು ಮುಂಚೂಣಿಯಲ್ಲಿಕನ್ನಡವೇ ನಮ್ಮ ಉಸಿರು, ಕನ್ನಡ ನಾಡೇ ನಮ್ಮ ಹೆಮ್ಮೆ!