ದಾವಣಗೆರೆ: ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಯಂ ಇಚ್ಛಾ ನಿವೃತ್ತಿ ಪಡೆದ ಮಾಯಕೊಂಡ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ (ಎಎಸ್ಐ) ಶ್ರೀ ನಾರಾಯಣ ಸ್ವಾಮಿ ಅವರಿಗೆ ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಗೌರವಪೂರ್ವಕ ಬೀಳ್ಕೊಡುಗೆ ನೀಡಲಾಯಿತು.
ದಾವಣಗೆರೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಶೇಖರ್ ಹೆಚ್.ಟಿ., ಐಪಿಎಸ್ ಅವರು ನಾರಾಯಣ ಸ್ವಾಮಿ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸುದೀರ್ಘ ಸೇವೆಯನ್ನು ಸ್ಮರಿಸಿ, ಅವರ ಮುಂದಿನ ನಿವೃತ್ತಿ ಜೀವನ ಸುಖ, ಶಾಂತಿ ಮತ್ತು ಆರೋಗ್ಯದಿಂದ ಕೂಡಿರಲಿ ಎಂದು ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹಾಗೂ ವೈಯಕ್ತಿಕವಾಗಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಚೇರಿಯ ಸಹಾಯಕ ಆಡಳಿತಾಧಿಕಾರಿಗಳಾದ ಶ್ರೀ ಮೆಹಬೂಬ್, ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ನಿವೃತ್ತ ಎಎಸ್ಐ ನಾರಾಯಣ ಸ್ವಾಮಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದು ಶುಭ ಕೋರಿದರು.
ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ನಾರಾಯಣ ಸ್ವಾಮಿ ಅವರಿಗೆ ಸಹೋದ್ಯೋಗಿಗಳು ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು.
ವರದಿ : ಸತೀಶ್ ಕುಮಾರ್
#DavanagerePolice #SPDavanagere #PoliceRetirement #ದಾವಣಗೆರೆ #ಪೊಲೀಸ್ ಇಲಾಖೆ